Web Stories
News 9 Today
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯಪಾಲರನ್ನ ಭೇಟಿಯಾದ ಕರ್ನಾಟಕ ಪತ್ರಕರ್ತರ ಸಂಘದ ನಿಯೋಗ.

ರಾಜ್ಯಪಾಲರನ್ನ ಭೇಟಿಯಾದ ಕರ್ನಾಟಕ ಪತ್ರಕರ್ತರ ಸಂಘದ ನಿಯೋಗ.

ಬೆಂಗಳೂರು /ಬಳ್ಳಾರಿ(8)
ಫೆಬ್ರವರಿ 20 ರಂದು ನಡೆಯಲಿರುವ ರಾಷ್ಟ್ರೀಯ ಪತ್ರಕರ್ತರ ಸಮ್ಮೆಳನ ಉದ್ಘಾಟಿಸಲಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು:ಜ,08; ಗಣಿನಗರಿ ಬಳ್ಳಾರಿಯಲ್ಲಿ ಮುಂಬರುವ ಫೆಬ್ರವರಿ 19 ಮತ್ತು 20 ರಂದು ನಗರದಲ್ಲಿ ಎರಡು ದಿನಗಳ ಕಾಲ ನಡೆಯುವ ರಾಷ್ಟ್ರೀಯ ಪತ್ರಕರ್ತರ ಸಮ್ಮೇಳನವನ್ನು ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ರವರು ಉದ್ಘಾಟಿಸಲಿದ್ದಾರೆ ಎಂದು ಕರ್ನಾಟಕ ಪತ್ರಕರ್ತರ ಸಂಘದ ಬಳ್ಳಾರಿ ಜಿಲ್ಲಾಧ್ಯಕ್ಷ ಯಾಳ್ಪಿ ವಲಿಭಾಷರವರು ತಿಳಿಸಿದರು.

ಇಂದು ರಾಜಭವನದಲ್ಲಿ ಕರ್ನಾಟಕ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಮುರುಗೇಶ್ ಬಿ.ಶಿವಪೂಜಿರವರ ನೇತೃತ್ವದ ನಿಯೋಗದಲ್ಲಿ ಇಂದು ರಾಜ್ಯಪಾಲರನ್ನ ಭೇಟಿಯಾಗಿ ಕಾರ್ಯಕ್ರಮಕ್ಕೆ ಆಹ್ವಾನಿಸಿದ ಬಳಿಕ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು.

ಬಳ್ಳಾರಿಯಲ್ಲಿ ಮುಂಬರುವ ಫೆಬ್ರವರಿಯಲ್ಲಿ ಐತಿಹಾಸಿಕ ಪತ್ರಕರ್ತರ ರಾಷ್ಟ್ರೀಯ ಸಮ್ಮೇಳನ ನಡೆಯಲಿದ್ದು, ಈ ಸಮ್ಮೇಳನದಲ್ಲಿ ದೇಶದ 15 ರಿಂದ 18 ರಾಜ್ಯಗಳ ಪತ್ರಕರ್ತ ಪ್ರತಿನಿಧಿಗಳು ಸುಮಾರು 500 ಜನ ಭಾಗವಹಿಸಲಿದ್ದು, ಎರಡು ದಿನಗಳ ಕಾಲ ಸಮ್ಮೇಳನ ಬಳ್ಳಾರಿ ನಗರದಲ್ಲಿ ಅದ್ಧೂರಿಯಾಗಿ ಜರುಗಲಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನ ರಾಜ್ಯಪಾಲರು ಮಾಡಲಿದ್ದು, ಮುಖ್ಯ ಅಥಿತಿಗಳಾಗಿ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರು ಭಾಗವಹಿಸುತ್ತಿದ್ದು ಬಳ್ಳಾರಿಯಲ್ಲಿ ಎರಡು ದಿನಗಳ ಕಾಲ ಪತ್ರಕರ್ತರ ಹಬ್ಬ ನಡೆಯಲಿದೆ ಎಂದರು.

ಫೆಬ್ರುವರಿ 19 ರಂದು ಮಧ್ಯಾಹ್ನ 3 ಗಂಟೆಯಿಂದ ಕರ್ನಾಟಕ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ರಾಜ್ಯ ಸಮಿತಿ ಸದಸ್ಯರನ್ನೊಳಗೊಂಡ ಎಲ್ಲಾ ಪದಾಧಿಕಾರಿಗಳು ಭಾಗವಹಿಸಲು ಫೆಬ್ರುವರಿ 20 ರಂದು ರಾಷ್ಟ್ರೀಯ ಸಮ್ಮೇಳನ ನಡೆಯಲಿದ್ದು ದೇಶದ ಆನೇಕ ರಾಜ್ಯಗಳ ಹಲವು ಖ್ಯಾತ ಪತ್ರಕರ್ತರು ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ ಎಂದು ಯಾಳ್ಪಿ ವಲಿಭಾಷ ತಿಳಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಮುರುಗೇಶ್ ಬಿ ಶಿವುಪೂಜಿ, ಸಂಘದ ರಾಜ್ಯ ಉಪಾಧ್ಯಕ್ಷ ಮಂಗಳೂರು ಸುರೇಶ್, ಬಳ್ಳಾರಿ ಜಿಲ್ಲಾ ಉಪಾಧ್ಯಕ್ಷ ಕೆ.ಬಜಾರಪ್ಪ, ಸೇರಿದಂತೆ ರಾಜ್ಯ ಪದಾಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.

Author
News 9 Today
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಚೇರಿ ಗಳು ವೀಕ್ಷಣೆ ಮಾಡಿದ, ಜಿಲ್ಲಾಧಿಕಾರಿ. ಬೇಸಿಗೆ,ಸಂದರ್ಭದಲ್ಲಿ ಜನರು ಕಚೇರಿಗಳು ಸುತ್ತ ಬಾರದು, ನಿರ್ಲಕ್ಷ ಮಾಡಿದರೆ,ಕ್ರಮ.ಬಡವರಿಗೆ ಸಮಯ ನೀಡಬೇಕಿತ್ತು: ಶ್ರೀರಾಮುಲುಮಹಿಳಾ ಮೀಸಲು ಮಸೂದೆ ಸ್ವಾಗತಾರ್ಹ; ಆದರೆ ಕ್ಷೇತ್ರ ಪುನರ್ವಿಂಗಡಣೆಯಿಂದ ದಕ್ಷಿಣದ ರಾಜ್ಯಗಳಿಗೆ ಅನ್ಯಾಯ: ನಾರಾ ವೈಜಯಂತಿ ರೆಡ್ಡಿ ಅಂಬೇಡ್ಕರ್ ಜಯಂತಿ ಆಚರಣೆ.ಅಂಬೇಡ್ಕರ್ ಜಯಂತಿ ಆಚರಣೆ.ದುಬಾರಿ ಬೆಲೆ ಬಾಳುವ, ಗಾಲಿ ಆಪ್ತನ, ಬಂದುಗಳ, ಲೇಔಟ್ ಗಳು, ಕುಡುಕರ ಅಡ್ಡಗಳು!!. ಜನರು ಆತಂಕ ದಲ್ಲಿ.ದುಬಾರಿ ಬೆಲೆ ಬಾಳುವ, ಗಾಲಿ ಆಪ್ತನ, ಬಂದುಗಳ, ಲೇಔಟ್ ಗಳು, ಕುಡುಕರ ಅಡ್ಡಗಳು!!. ಜನರು ಆತಂಕ ದಲ್ಲಿ.ದುಬಾರಿ ಬೆಲೆ ಬಾಳುವ, ಗಾಲಿ ಆಪ್ತನ, ಬಂದುಗಳ, ಲೇಔಟ್ ಗಳು, ಕುಡುಕರ ಅಡ್ಡಗಳು!!. ಜನರು ಆತಂಕ ದಲ್ಲಿ.ಪಾಲಿಕೆಯಾ ನೌಕರರ ಧರಣಿಗೆ ಬಿಷ್ಮ ಎಂಟ್ರಿ!! ಯಾಲ್ಲವು, ನೋಡಿಕೊಳ್ಳುವ, ಬರವಸೆಯನ್ನು ಕೊಟ್ಟ ನಾರಾ ಸೂರ್ಯ ನಾರಾಯಣ ರೆಡ್ಡಿ.ಪಾಲಿಕೆಯಾ ನೌಕರರ ಧರಣಿಗೆ ಬಿಷ್ಮ ಎಂಟ್ರಿ!! ಯಾಲ್ಲವು, ನೋಡಿಕೊಳ್ಳುವ, ಬರವಸೆಯನ್ನು ಕೊಟ್ಟ ನಾರಾ ಸೂರ್ಯ ನಾರಾಯಣ ರೆಡ್ಡಿ.