Web Stories
News 9 Today
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪತ್ರಕರ್ತರ ಒಗ್ಗಟ್ಟು ಜಿಲ್ಲೆಯ ಅಭಿವೃದ್ಧಿಗೆ ಪೂರಕ: ಸಚಿವ ನಾಗೇಂದ್ರ

ಪತ್ರಕರ್ತರ ಒಗ್ಗಟ್ಟು ಜಿಲ್ಲೆಯ ಅಭಿವೃದ್ಧಿಗೆ ಪೂರಕ: ಸಚಿವ ನಾಗೇಂದ್ರ

ಬಳ್ಳಾರಿ,ಜೂ.19: ಬಳ್ಳಾರಿ ಜಿಲ್ಲೆಯಲ್ಲಿ ಹಲವು ಪತ್ರಕರ್ತರ ಸಂಘಗಳಿವೆ. ಯಾವುದೇ ಕ್ಷೇತ್ರದಲ್ಲಿ ಬಣ ರಾಜಕೀಯ, ಗುಂಪುಗಾರಿಕೆ ಸಹಜ. ಆದರೆ ಜಿಲ್ಲೆಯ ಪತ್ರಕರ್ತರು ಭಿನ್ನಾಭಿಪ್ರಾಯ ಮರೆತು ಒಂದಾದರೆ ಜಿಲ್ಲೆಯ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣ, ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಚಿವ ಬಿ.ನಾಗೇಂದ್ರ ಹೇಳಿದರು.

ಸೋಮವಾರ ನೆಹರೂ ಕಾಲೋನಿಯ ಅವರ ನಿವಾಸದಲ್ಲಿ ತಮ್ಮನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರನ್ನುದ್ಧೇಶಿಸಿ ಮಾತನಾಡಿದರು.

ನಾನು ಶಾಸಕನಾಗಿ, ಸಚಿವನಾಗಿ ಆಯ್ಕೆ ಆಗಿರುವುದರಿಂದ ಜಿಲ್ಲೆಯ ಜನರಲ್ಲಿ ಸಾಕಷ್ಟು ನಿರೀಕ್ಷೆಗಳಿವೆ. ನಮ್ಮ ಶ್ರಮ ಶೇ.10 ರಷ್ಟಿದ್ದರೆ, ಜನರ ನಿರೀಕ್ಷೆಗಳು ಶೇ.100ರಷ್ಟಿವೆ. ಹೀಗಾಗಿ ಪಕ್ಷ ಹಾಗೂ ಜನರು ನೀಡಿದ ಈ ದೊಡ್ಡ ಜವಾಬ್ದಾರಿ ನಿಭಾಯಿಸಬೇಕೆಂದರೆ ಪತ್ರಕರ್ತರ ಸಹಕಾರ ಮುಖ್ಯ ಎಂದರು.

ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿ ಏನೇ ಸಲಹೆ ಸೂಚನೆಗಳು ಇದ್ದರೂ ಪತ್ರಕರ್ತರು ನೇರವಾಗಿ ತಿಳಿಸಬಹುದು. ಸಮಸ್ಯೆಗಳನ್ನು ಮಾಧ್ಯಮದಲ್ಲಿ ವರದಿ ಮಾಡುವ ಮೊದಲು ನನ್ನನ್ನು ಒಮ್ಮೆ ಸಂಪರ್ಕಿಸಿ ಮಾಹಿತಿ ನೀಡಿ, ಗಡುವು ನೀಡಿದರೆ ಆ ಕೆಲಸ ಮಾಡುವೆ. ಜನಹಿತ ಇಟ್ಟುಕೊಂಡು ಮಾಧ್ಯಮದವರು ಮಾಡುವ ವಿಮರ್ಶಾತ್ಮಕ ವರದಿಗಳು ವಿಪಕ್ಷದವರಿಗೆ ಅನಾಯಾಸ ಅಸ್ತ್ರ ಕೊಡುವ ಕೆಲಸ ಆಗಬಾರದೆಂದರು.

ಪತ್ರಕರ್ತರ ಸಂಘ ಹಾಗೂ ಪತ್ರಕರ್ತರ ಶ್ರೇಯೋಭಿವೃದ್ಧಿಗಾಗಿ ನಾನು ಈ ಹಿಂದೆ ನೀಡಿರುವ ಭರವಸೆಗಳನ್ನು ಈಡೇರಿಸುವೆ. ಪತ್ರಕರ್ತರ ಕಲ್ಯಾಣಕ್ಕೆ ಸಂಬಂಧಿಸಿದ ನಿಮ್ಮ ಎಲ್ಲ ಕೆಲಸ ಕಾರ್ಯಗಳಿಗೆ ನನ್ನ ಬೆಂಬಲ ಇದೆ ಎಂದು ಹೇಳಿದ ಸಚಿವ ಬಿ.ನಾಗೇಂದ್ರ, ನಾವೆಲ್ಲರೂ ಒಗ್ಗಟ್ಟಾಗಿ ಜಿಲ್ಲೆಯನ್ನು ಅಭಿವೃದ್ಧಿಪಡಿಸೋಣ ಎಂದರು.

ಇದಕ್ಕೂ ಮುನ್ನ ಮಾತನಾಡಿದ ಕಾನಿಪ ರಾಜ್ಯ ಸಮಿತಿ ಸದಸ್ಯ ಎನ್.ವೀರಭದ್ರಗೌಡ; ನೂತನ ಸಚಿವರಿಗೆ ಸಂಘದ ಪರವಾಗಿ ಅಭಿನಂದಿಸಿದರು. ನನ್ನ ಸಹಪಾಠಿಯೊಬ್ಬರು ನಾಲ್ಕು ಸಲ ಶಾಸಕರಾಗಿ ಈಗ ಸಚಿವರಾಗಿರುವುದು ನನಗೆ ವೈಯಕ್ತಿಕವಾಗಿ ತುಂಬ ಸಂತೋಷ ಆಗಿದೆ. ಸಚಿವರು ಜಿಲ್ಲೆಯ ಸಮಗ್ರ ಅಭಿವೃದ್ಧಿಯನ್ನು ಮಾಡುವುದರ ಜೊತೆ ಜೊತೆಗೆ ಪತ್ರಕರ್ತರ ಕಲ್ಯಾಣ ಕೆಲಸವನ್ನೂ ಮಾಡಲಿ ಎಂದು ಮನವಿ ಮಾಡಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಯಾಳ್ಪಿ ವಲಿ ಬಾಷ ಹಾಗೂ ಪ್ರಧಾನ ಕಾರ್ಯದರ್ಶಿ ವಾರ್ತಾ ರವಿ ಅವರು ಮುಂದಿನ ತಿಂಗಳು ನಡೆಯಲಿರುವ ಪತ್ರಿಕಾ ದಿನಾಚರಣೆಗೆ ಆಗಮಿಸುವಂತೆ ಆಹ್ವಾನ ನೀಡಿದರು.

ಕಾನಿಪ ಜಿಲ್ಲಾ ಉಪಾಧ್ಯಕ್ಷ ಬಜಾರಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ; ಸಂಘಕ್ಕೆ ಈ ಹಿಂದೆ ನೀಡಿರುವ ಭರವಸೆಗಳನ್ನು ಈಡೇರಿಸುವಂತೆ ಮನವಿ ಮಾಡಿದರು.

ಪದಾಧಿಕಾರಿಗಳಾದ ಪಿ.ರಘುರಾಂ ಗುರುನಾಥ್, ವೆಂಕಟೇಶ್ ದೇಸಾಯಿ, ಇಮಾಮ್ ಗೋಡೆಕಾರ, ಜಂಬುನಾಥ ವೆಂಕೋಬಿ, ಸಿದ್ದೀಕ್ , ಮಲ್ಲಿಕಾರ್ಜುನ, ಜಿ ಗೋರ್ದನ್ ರೆಡ್ಡಿ, ಅಸ್ಲಾಂ ಭಾಷಾ, ಮಹೇಶ್ ಸೇರಿದಂತೆ ಹಲವು ಜನ ಪತ್ರಕರ್ತರು ಹಾಜರಿದ್ದರು.

Author
News 9 Today
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಚೇರಿ ಗಳು ವೀಕ್ಷಣೆ ಮಾಡಿದ, ಜಿಲ್ಲಾಧಿಕಾರಿ. ಬೇಸಿಗೆ,ಸಂದರ್ಭದಲ್ಲಿ ಜನರು ಕಚೇರಿಗಳು ಸುತ್ತ ಬಾರದು, ನಿರ್ಲಕ್ಷ ಮಾಡಿದರೆ,ಕ್ರಮ.ಬಡವರಿಗೆ ಸಮಯ ನೀಡಬೇಕಿತ್ತು: ಶ್ರೀರಾಮುಲುಮಹಿಳಾ ಮೀಸಲು ಮಸೂದೆ ಸ್ವಾಗತಾರ್ಹ; ಆದರೆ ಕ್ಷೇತ್ರ ಪುನರ್ವಿಂಗಡಣೆಯಿಂದ ದಕ್ಷಿಣದ ರಾಜ್ಯಗಳಿಗೆ ಅನ್ಯಾಯ: ನಾರಾ ವೈಜಯಂತಿ ರೆಡ್ಡಿ ಅಂಬೇಡ್ಕರ್ ಜಯಂತಿ ಆಚರಣೆ.ಅಂಬೇಡ್ಕರ್ ಜಯಂತಿ ಆಚರಣೆ.ದುಬಾರಿ ಬೆಲೆ ಬಾಳುವ, ಗಾಲಿ ಆಪ್ತನ, ಬಂದುಗಳ, ಲೇಔಟ್ ಗಳು, ಕುಡುಕರ ಅಡ್ಡಗಳು!!. ಜನರು ಆತಂಕ ದಲ್ಲಿ.ದುಬಾರಿ ಬೆಲೆ ಬಾಳುವ, ಗಾಲಿ ಆಪ್ತನ, ಬಂದುಗಳ, ಲೇಔಟ್ ಗಳು, ಕುಡುಕರ ಅಡ್ಡಗಳು!!. ಜನರು ಆತಂಕ ದಲ್ಲಿ.ದುಬಾರಿ ಬೆಲೆ ಬಾಳುವ, ಗಾಲಿ ಆಪ್ತನ, ಬಂದುಗಳ, ಲೇಔಟ್ ಗಳು, ಕುಡುಕರ ಅಡ್ಡಗಳು!!. ಜನರು ಆತಂಕ ದಲ್ಲಿ.ಪಾಲಿಕೆಯಾ ನೌಕರರ ಧರಣಿಗೆ ಬಿಷ್ಮ ಎಂಟ್ರಿ!! ಯಾಲ್ಲವು, ನೋಡಿಕೊಳ್ಳುವ, ಬರವಸೆಯನ್ನು ಕೊಟ್ಟ ನಾರಾ ಸೂರ್ಯ ನಾರಾಯಣ ರೆಡ್ಡಿ.ಪಾಲಿಕೆಯಾ ನೌಕರರ ಧರಣಿಗೆ ಬಿಷ್ಮ ಎಂಟ್ರಿ!! ಯಾಲ್ಲವು, ನೋಡಿಕೊಳ್ಳುವ, ಬರವಸೆಯನ್ನು ಕೊಟ್ಟ ನಾರಾ ಸೂರ್ಯ ನಾರಾಯಣ ರೆಡ್ಡಿ.