Web Stories
News 9 Today
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ನಾರಾ ಭರತ್ ರೆಡ್ಡಿ

ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ನಾರಾ ಭರತ್ ರೆಡ್ಡಿ

ಬಳ್ಳಾರಿ, ಸೆ.13: ಬಳ್ಳಾರಿಯ 15ನೇ ವಾರ್ಡ್' ಕಾಟೇಗುಡ್ಡದ ಬಹುದಿನಗಳ ಸಮಸ್ಯೆಯಾಗಿದ್ದ ಒಳ ಚರಂಡಿ ಸಮಸ್ಯೆ ಬಗೆ ಹರಿಯಲಿದೆ ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು.

ಗುರುವಾರ ಸಂಜೆ ಕಾಟೇಗುಡ್ಡ ಪ್ರದೇಶದ ಕೆ.ಸಿ.ರಸ್ತೆಯಲ್ಲಿ ಸಿಸಿ ರಸ್ತೆ ಕಾಮಗಾರಿಗೆ (ಅಂದಾಜು 46 ಲಕ್ಷ ರೂ.ಗಳು) ಭೂಮಿ ಪೂಜೆ ನೆರವೇರಿಸಿದ ಬಳಿಕ ಸಾರ್ವಜನಿಕರನ್ನುದ್ಧೇಶಿಸಿ ಮಾತನಾಡಿದರು.

ಬಹಳ ದಿನಗಳಿಂದ ಬೀದಿ ದೀಪಗಳ ಸಮಸ್ಯೆಯಿದ್ದು, ತಕ್ಷಣ ಪರಿಹರಿಸಬೇಕೆಂದು ಕಾಟೇಗುಡ್ಡದ ನಿವಾಸಿಗಳು ಶಾಸಕರಿಗೆ ಮನವಿ ಮಾಡಿದರು. ಬೀದಿ ದೀಪಗಳನ್ನು ಅಳವಡಿಸುವಂತೆ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಚನೆ ನೀಡಿದರು.

ಅರ್ಹ ಫಲಾನುಭವಿಗಳ ನಿವಾಸದ ಹಕ್ಕು ಪತ್ರ ವಿತರಿಸಬೇಕೆಂದು ಸ್ಥಳೀಯರು ಮನವಿ ಮಾಡಿದರು.

ತದನಂತರ 6ನೇ ವಾರ್ಡಿನ ಬಳ್ಳಾರೆಪ್ಪ ಕಾಲೋನಿಯಲ್ಲಿ ಅಂದಾಜು ವೆಚ್ಚ 45 ಲಕ್ಷ ರೂ.ಗಳ ಸಿಸಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.

ಇದಕ್ಕೂ ಮುನ್ನ ನಗರದ ಮೋತಿ ವೃತ್ತ ಸಮೀಪದ ಗೌಳೇರ ಹಟ್ಟಿಯಲ್ಲಿ ಬೆಣಕಲ್ ಸೋದರರ ನೇತೃತ್ವದಲ್ಲಿ ಗಣೇಶ ಪೆಂಡಾಲ್'ನಲ್ಲಿ ಏರ್ಪಡಿಸಿದ್ದ ಅನ್ನ ಸಂತರ್ಪಣೆಗೆ ಚಾಲನೆ ನೀಡಿದರು. ಈ ವೇಳೆ ಶಾಸಕ ನಾರಾ ಭರತ್ ರೆಡ್ಡಿಯವರನ್ನು ಗೌಳೇರ ಹಟ್ಟಿಯ ಮುಖಂಡರು ಸನ್ಮಾನಿಸಿದರು.

ಈ ಸಂದರ್ಭ ಮೇಯರ್ ಮುಲ್ಲಂಗಿ ನಂದೀಶ್, ಪಾಲಿಕೆಯ ಸದಸ್ಯರಾದ ನೂರ್ ಮೊಹಮ್ಮದ್, ಪದ್ಮರೋಜಾ, ಮಿಂಚು ಶ್ರೀನಿವಾಸ್, ಎಂ.ಪ್ರಭಂಜನಕುಮಾರ್, ಕಾಂಗ್ರೆಸ್ ಮುಖಂಡರಾದ ಬಿಆರೆಲ್ ಸೀನಾ, ಸುಬ್ಬರಾಯುಡು, ಶಿವರಾಜ, ಮುಂಡ್ಲೂರು ವಿವೇಕ್ ಮತ್ತಿತರರು ಹಾಜರಿದ್ದರು.

Author
News 9 Today
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಚೇರಿ ಗಳು ವೀಕ್ಷಣೆ ಮಾಡಿದ, ಜಿಲ್ಲಾಧಿಕಾರಿ. ಬೇಸಿಗೆ,ಸಂದರ್ಭದಲ್ಲಿ ಜನರು ಕಚೇರಿಗಳು ಸುತ್ತ ಬಾರದು, ನಿರ್ಲಕ್ಷ ಮಾಡಿದರೆ,ಕ್ರಮ.ಬಡವರಿಗೆ ಸಮಯ ನೀಡಬೇಕಿತ್ತು: ಶ್ರೀರಾಮುಲುಮಹಿಳಾ ಮೀಸಲು ಮಸೂದೆ ಸ್ವಾಗತಾರ್ಹ; ಆದರೆ ಕ್ಷೇತ್ರ ಪುನರ್ವಿಂಗಡಣೆಯಿಂದ ದಕ್ಷಿಣದ ರಾಜ್ಯಗಳಿಗೆ ಅನ್ಯಾಯ: ನಾರಾ ವೈಜಯಂತಿ ರೆಡ್ಡಿ ಅಂಬೇಡ್ಕರ್ ಜಯಂತಿ ಆಚರಣೆ.ಅಂಬೇಡ್ಕರ್ ಜಯಂತಿ ಆಚರಣೆ.ದುಬಾರಿ ಬೆಲೆ ಬಾಳುವ, ಗಾಲಿ ಆಪ್ತನ, ಬಂದುಗಳ, ಲೇಔಟ್ ಗಳು, ಕುಡುಕರ ಅಡ್ಡಗಳು!!. ಜನರು ಆತಂಕ ದಲ್ಲಿ.ದುಬಾರಿ ಬೆಲೆ ಬಾಳುವ, ಗಾಲಿ ಆಪ್ತನ, ಬಂದುಗಳ, ಲೇಔಟ್ ಗಳು, ಕುಡುಕರ ಅಡ್ಡಗಳು!!. ಜನರು ಆತಂಕ ದಲ್ಲಿ.ದುಬಾರಿ ಬೆಲೆ ಬಾಳುವ, ಗಾಲಿ ಆಪ್ತನ, ಬಂದುಗಳ, ಲೇಔಟ್ ಗಳು, ಕುಡುಕರ ಅಡ್ಡಗಳು!!. ಜನರು ಆತಂಕ ದಲ್ಲಿ.ಪಾಲಿಕೆಯಾ ನೌಕರರ ಧರಣಿಗೆ ಬಿಷ್ಮ ಎಂಟ್ರಿ!! ಯಾಲ್ಲವು, ನೋಡಿಕೊಳ್ಳುವ, ಬರವಸೆಯನ್ನು ಕೊಟ್ಟ ನಾರಾ ಸೂರ್ಯ ನಾರಾಯಣ ರೆಡ್ಡಿ.ಪಾಲಿಕೆಯಾ ನೌಕರರ ಧರಣಿಗೆ ಬಿಷ್ಮ ಎಂಟ್ರಿ!! ಯಾಲ್ಲವು, ನೋಡಿಕೊಳ್ಳುವ, ಬರವಸೆಯನ್ನು ಕೊಟ್ಟ ನಾರಾ ಸೂರ್ಯ ನಾರಾಯಣ ರೆಡ್ಡಿ.